ಹೊಸದಿಗಂತ ಬೆಳಗಾವಿ:
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಸುರಿಯುವ ಮಳೆಯಲ್ಲೇ ಅರೆಬೆತ್ತಲೆಯಲ್ಲಿ ಶನಿವಾರ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
‘ಕಾವೇರಿ ನಮ್ಮದು, ಮಹದಾಯಿ ನಮ್ಮದು, ಕೃಷ್ಣಾ ನಮ್ಮದು’ ಎಂಬ ಅಡಿಬರಹ ಹೊಂದಿದ ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನಾಕಾರರು ವಿನೂತನ ರೀತಿಯಲ್ಲಿ ಪತ್ರಿಭಟಿಸಿ ‘ನಮ್ಮ ನೀರು ನಮ್ಮ ಹಕ್ಕು’ ಎಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಘೋಷಣೆಗಳನ್ನು ಕೂಗಿದ ರಾಜ್ಯ ಹಾಗೂ ತಮಿಳುನಾಡು ಸರ್ಕಾರದ ವಿರುದ್ದ ಅಸಮಾಧಾನ ಹೋರ ಹಾಕಿದರು.
ಈ ಸಂದರ್ಭದಲ್ಲಿ ಪತ್ರಿಭಟನೆಯ ವೇಳೆ ಮಾತನಾಡಿದ ಕರವೇ ಮುಖಂಡರು, “ಪ್ರಸಕ್ತ ವರ್ಷ ಕರ್ನಾಟಕದಲ್ಲಿ ವಾಡಿಕೆ ಮಳೆಯ ಕೊರತೆಯಾಗಿದೆ. ರಾಜ್ಯದ ಜನತೆ ಮತ್ತು ರೈತರೇ ಕುಡಿಯುವ ನೀರು ಹಾಗೂ ನೀರಾವರಿಗೆ ತತ್ಕರಿಸುತ್ತಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು” ಎಂದು ರಾಜ್ಯ ಸರ್ಕಾರ ಎಚ್ಚರಿಸಿದರು.
ಒಂದು ವೇಳೆ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದೆ ನೀರು ಬಿಡುಗಡೆಗೊಳಿಸಿದರೆ, ಬರುವ ಆಗಸ್ಟ್ 13ರಂದು ‘ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಸಂಪೂರ್ಣ ಬಂದ್’ ಮಾಡುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
ಈ ಪ್ರತಿಭಟನೆಯಿಂದಾಗಿ ನಗರದ ಚೆನ್ನಮ್ಮ ವೃತ್ತದಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಈ ವೇಳೆ ಕರವೇ ಜಿಲ್ಲಾಧ್ಯಂತ ವಾಜಿದ ಹಿರೇಗುಡಿ, ತಾಲೂಕು ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಸೇರಿದಂತೆ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.



