ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಮಾನ್ಸೂನ್ ಸಕ್ರಿಯವಾಗಿದ್ದು, ಕೇರಳ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ.
ಗುಡುಗು-ಮಿಂಚಿನೊಂದಿಗೆ ಮಳೆ, ಆರೆಂಜ್ ಅಲರ್ಟ್
ಕೇರಳ ಮತ್ತು ಗುಜರಾತ್‌ನ ಹಲವು ಜಿಲ್ಲೆಗಳ ಜೊತೆಗೆ ಬಿಹಾರ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು-ಕಾಶ್ಮೀರ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್ ಹಾಗೂ ಈಶಾನ್ಯ ರಾಜ್ಯಗಳಲ್ಲಿಯೂ ಮಳೆಯ ಎಚ್ಚರಿಕೆ ನೀಡಲಾಗಿದೆ. ಕೆಲವು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಕೂಡ ಜಾರಿಯಲ್ಲಿದೆ.
ಇದನ್ನೂ ಓದಿ:
ಜನರಿಗೆ IMD ಸಲಹೆ
ಅನಗತ್ಯ ಪ್ರಯಾಣ ತಪ್ಪಿಸುವಂತೆ, ನದಿ-ತಗ್ಗು ಪ್ರದೇಶಗಳಿಂದ ದೂರವಿರುವಂತೆ ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.



