August 1, 2026
Saturday, August 1, 2026
spot_img

ವಿದ್ಯಾರ್ಥಿಗಳಲ್ಲಿ HIV ಭೀತಿ: ಸೋಂಕಿನ ವದಂತಿಗೆ ಬ್ರೇಕ್ ಹಾಕಿದ ಆರೋಗ್ಯ ಸಚಿವರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ (HIV) ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಮತ್ತು ಸಾವಿರಾರು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಇವು ಸಂಪೂರ್ಣ ಆಧಾರರಹಿತ ಮತ್ತು ಸುಳ್ಳು ವದಂತಿಗಳು ಎಂದು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಜಾಗೃತಿ ಮಾತ್ರ: ಪರೀಕ್ಷೆ ಕಡ್ಡಾಯವಲ್ಲ

ಕಾಲೇಜು ವಿದ್ಯಾರ್ಥಿಗಳಲ್ಲಿ 7,000 ಹೆಚ್‌ಐವಿ ಪ್ರಕರಣಗಳು ಪತ್ತೆಯಾಗಿವೆ ಎಂಬ ಸುದ್ದಿ ನಿಜವಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಸೋಂಕಿನ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾತ್ರ ನಡೆಸಲಾಗುತ್ತಿದೆಯೇ ಹೊರತು, ಯಾವುದೇ ವಿದ್ಯಾರ್ಥಿಗೆ ಅಥವಾ ಸಾಮಾನ್ಯ ವ್ಯಕ್ತಿಗೆ ಪರೀಕ್ಷೆಯನ್ನು ಕಡ್ಡಾಯಗೊಳಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

HIV ಪರೀಕ್ಷೆ ಕಡ್ಡಾಯ ಇರುವ ಎರಡು ಸಂದರ್ಭಗಳು

ಪ್ರಸ್ತುತ ರಾಜ್ಯದಲ್ಲಿ ಕೇವಲ ಎರಡು ಸಂದರ್ಭಗಳಲ್ಲಿ ಮಾತ್ರ ಹೆಚ್‌ಐವಿ ತಪಾಸಣೆ ನಡೆಸಲಾಗುತ್ತದೆ:

  • ಗರ್ಭಿಣಿಯರ ಹೆರಿಗೆ ಸಮಯದಲ್ಲಿ
  • ರಕ್ತದಾನದ ಸಮಯದಲ್ಲಿ

ರಾಜ್ಯದಲ್ಲಿ ಹೆಚ್‌ಐವಿ ಪ್ರಸ್ತುತ ಸ್ಥಿತಿಗತಿ

ಇತ್ತೀಚಿನ ಮೂರು ತಿಂಗಳಲ್ಲಿ 5,53,453 ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅದರಲ್ಲಿ 3,091 ಜನರಲ್ಲಿ ಸೋಂಕು ದೃಢಪಟ್ಟಿದೆ. ತಪಾಸಣೆಗೊಳಗಾದ 2,81,742 ಗರ್ಭಿಣಿಯರಲ್ಲಿ 111 ಜನರಿಗೆ ಪಾಸಿಟಿವ್ ಬಂದಿದೆ.

2004 ರಿಂದೀಚೆಗೆ ರಾಜ್ಯದಲ್ಲಿ ಒಟ್ಟು 39,028 ಸೋಂಕಿತರು ನೋಂದಣಿಯಾಗಿದ್ದು, 18 ರಿಂದ 35 ವರ್ಷದೊಳಗಿನ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !