September 19, 2026
Saturday, September 19, 2026
spot_img

ವಿಜಯಪುರದಲ್ಲಿ ಪಿಸಿ ಪರೀಕ್ಷೆ ಗೊಂದಲ: ಕಾಲೇಜು ಗೇಟ್ ಮುರಿದು ಅಭ್ಯರ್ಥಿಗಳ ಆಕ್ರೋಶ

ಹೊಸದಿಗಂತ ವಿಜಯಪುರ:

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪ್ರವೇಶ ಪರೀಕ್ಷೆ ವೇಳೆ ಗೊಂದಲ ಉಂಟಾಗಿ, ಪರೀಕ್ಷಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ತಿಕೋಟಾ ಪಟ್ಟಣದ ಶಾರದಾಂಬಾ ಪಿಯು ಕಾಲೇಜ್ ಎದುರು ನಡೆದಿದೆ.

ಓ ಎಮ್ ಆರ್ ಶೀಟ್ ಹಾಗೂ ಪ್ರಶ್ನೆ ಪತ್ರಿಕೆ ಹೊಂದಾಣಿಕೆ ಆಗುತ್ತಿಲ್ಲ ಎಂದು ಪರೀಕ್ಷೆ ಬಹಿಷ್ಕರಿಸಿ ಕೆಲ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರ ಬಂದಿದ್ದು, ಇನ್ನು ಕೆಲ ಪರೀಕ್ಷಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಬಳಿಕ ಪರೀಕ್ಷಾ ಕೇಂದ್ರದ ಮುಂಭಾಗ ಕುಳಿತು ಕೆಲ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿ, ನಮಗೆ ನ್ಯಾಯ ಬೇಕು, ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮಗೆ ನ್ಯಾಯ ಕೊಡಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಇದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಬಳಿಕ ಪರೀಕ್ಷಾ ಕೇಂದ್ರದ ಮುಂಭಾಗ ಪೊಲೀಸ್ ಸಿಬ್ಬಂದಿಗಳೊಂದಿಗೆ ಪರೀಕ್ಷಾರ್ಥಿಗಳ ವಾಗ್ವಾದ ನಡೆದಿದ್ದು, ಈ ವೇಳೆ ಕಾಲೇಜಿನ ಗೇಟ್ ನೂಕಿ, ಒಳ ನುಗ್ಗಲು ಯತ್ನಿಸುತ್ತಿದ್ದಂತೆ, ಆಕ್ರೋಶಗೊಂಡ ಪರೀಕ್ಷಾರ್ಥಿಗಳ ನೂಕಾಟಕ್ಕೆ ಕಾಲೇಜಿನ ಗೇಟ್ ಮುರಿದು ಬಿದಿದೆ. ಅನಂತರ ಒಳ ನುಗ್ಗಲು ಯತ್ನಿಸುತ್ತಿದ್ದಂತೆ ಪರೀಕ್ಷಾರ್ಥಿಗಳನ್ನು ಪೊಲೀಸ್ ಅಧಿಕಾರಿಗಳು ಚದುರಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಹಾಗೂ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !