ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದ್ದು, ಮುಂದಿನ ಒಂದು ವಾರವೂ ಮಳೆ ಚುರುಕಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ರೆಡ್, ಆರೆಂಜ್ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಸೇರಿದಂತೆ ಕರಾವಳಿಯ ಇತರೆ ಜಿಲ್ಲೆಗಳು ಹಾಗೂ ಮಲೆನಾಡಿನ ಕೆಲವು ಭಾಗಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಇದನ್ನೂ ಓದಿ:
ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ
ಬೆಂಗಳೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಬಾಗಲಕೋಟೆ, ಧಾರವಾಡ, ಕಲಬುರಗಿ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 40–50 ಕಿ.ಮೀ. ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.



