August 3, 2026
Monday, August 3, 2026
spot_img

ವಿಧಾನಸಭೆಗೆ ಸ್ಪೀಕರ್​​, ಪರಿಷತ್ತಿಗೆ​​ ಸಭಾಪತಿ ಹೆಸರು ಪ್ರಕಟಿಸಿದ ಎಐಸಿಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ಅಧಿಕೃತವಾಗಿ ಹೆಸರನ್ನು ಪ್ರಕಟಿಸಿದೆ.

ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ವಿಧಾನಸಭೆ ನೂತನ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜಿ ಎಸ್ ಪಾಟೀಲ್ ಅವರು ಹಿರಿಯ ಶಾಸಕರಾಗಿದ್ದಾರೆ. ಇದೆ ವೇಳೆ ವಿಧಾನ ಪರಿಷತ್‌ನ ನೂತನ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಸಲೀಂ ಅಹ್ಮದ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ವಿಧಾನಸಭೆ ಉಪಸಭಾಧ್ಯಕ್ಷರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಅವರನ್ನು ನೇಮಿಸಲಾಗಿದೆ. ಮತ್ತೊಂದೆಡೆ ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಹಿರಿಯ ನಾಯಕಿ ಮತ್ತು ಮಾಜಿ ಸಚಿವೆ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷವು ರಾಜ್ಯದ ವಿವಿಧ ವಲಯ ಹಾಗೂ ಸಮುದಾಯಗಳಿಗೆ ಸಮಾನ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಿದೆ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !