July 21, 2026
Tuesday, July 21, 2026
spot_img

ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪಶುಸಂಗೋಪನೆ ಸಚಿವ ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌. ಭೋಸರಾಜು, ವಸತಿ ಸಚಿವ ಜಮೀರ್ ಅಹಮದ್ ಖಾನ್, ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !