August 4, 2026
Tuesday, August 4, 2026
spot_img

19 ವರ್ಷದ ಯುವತಿಯ ಅನುಮಾನಾಸ್ಪದ ಸಾ*ವು: ಬರ್ತ್‌ಡೇ ಪಾರ್ಟಿ ನೆಪದಲ್ಲಿ ಕೊ*ಲೆ ಆರೋಪ, ಮೂವರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಜಿಲ್ಲೆಯಲ್ಲಿ 19 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆರಂಭದಲ್ಲಿ ರಸ್ತೆ ಅಪಘಾತ ಎಂದು ದಾಖಲಾಗಿದ್ದ ಪ್ರಕರಣದಲ್ಲಿ ಇದೀಗ ಕೊಲೆ ಹಾಗೂ ಅತ್ಯಾಚಾರ ಯತ್ನದ ಆರೋಪ ಕೇಳಿಬಂದಿದ್ದು, ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಸ್ನೇಹಿತರೊಂದಿಗೆ ತೆರಳಿದ್ದ ಯುವತಿ

ಹೊನ್ನೆಮಡು ಗ್ರಾಮದ ನವೀನಾ ಮಂಡ್ಯ ನಗರದ ಹಣ್ಣಿನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಸ್ನೇಹಿತರಾದ ಅಶ್ವಿನಿ, ವಿಷ್ಣು ಹಾಗೂ ಶಿವಕುಮಾರ್ ಅವರೊಂದಿಗೆ ಕೊಮ್ಮೇರಹಳ್ಳಿ ಬೆಟ್ಟಕ್ಕೆ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನವೀನಾ ಮೃತಪಟ್ಟಿದ್ದು, ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ:

ಕುಟುಂಬದಿಂದ ಕೊಲೆ ಆರೋಪ

ಇದು ರಸ್ತೆ ಅಪಘಾತವಲ್ಲ. ಹುಟ್ಟುಹಬ್ಬ ಆಚರಣೆಯ ನೆಪದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಕೊಲೆ ಮಾಡಿ ಅಪಘಾತದಂತೆ ಬಿಂಬಿಸಲಾಗಿದೆ ಎಂದು ಮೃತ ಯುವತಿಯ ತಾಯಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೂವರು ಪೊಲೀಸ್ ವಶಕ್ಕೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ, ವೈಜ್ಞಾನಿಕ ಸಾಕ್ಷ್ಯಗಳು ಹಾಗೂ ತನಿಖೆಯ ಬಳಿಕ ಪ್ರಕರಣದ ನಿಜಾಂಶ ಬಹಿರಂಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !