August 4, 2026
Tuesday, August 4, 2026
spot_img

ಮಹಿಳೆಯರ ಆರೋಗ್ಯದತ್ತ ರಾಜ್ಯ ಸರ್ಕಾರದ ಚಿತ್ತ: ‘ಋತುತಾರೆ’ ಯೋಜನೆಗೆ ಬ್ರ್ಯಾಂಡ್ ಅಂಬಾಸಿಡರ್ ಆದ ನಟಿ ರಮ್ಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆಯರ ಆರೋಗ್ಯ ಮತ್ತು ಸಬಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿರುವ ಕರ್ನಾಟಕ ಸರ್ಕಾರ, ‘ಋತುತಾರೆ’ ಹೆಸರಿನ ಹೊಸ ಆರೋಗ್ಯ ಜಾಗೃತಿ ಯೋಜನೆಯನ್ನು ಆರಂಭಿಸಿದೆ.

ಮಹಿಳೆಯರ ಋತುಚಕ್ರ, ಮೆನೋಪಾಸ್ ಹಾಗೂ ಇತರ ದೈಹಿಕ-ಮಾನಸಿಕ ಆರೋಗ್ಯ ಸಮಸ್ಯೆಗಳ ಕುರಿತು ಅರಿವು ಮೂಡಿಸಿ, ಅಗತ್ಯ ಮಾರ್ಗದರ್ಶನ ಮತ್ತು ಬೆಂಬಲ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಮಹಿಳೆಯರ ಆರೋಗ್ಯದತ್ತ ವಿಶೇಷ ಗಮನ

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಮತ್ತು ನಟಿ ರಮ್ಯಾ ಯೋಜನೆಯ ಬಗ್ಗೆ ಮಾಹಿತಿ ಹಂಚಿಕೊಂಡರು. ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಸೂಕ್ತ ಶಿಫಾರಸುಗಳನ್ನು ನೀಡುವ ಉದ್ದೇಶದಿಂದ ತಜ್ಞ ವೈದ್ಯರ ಸಮಿತಿಯನ್ನೂ ರಚಿಸಲಾಗಿದೆ ಎಂದು ಸಚಿವರು ತಿಳಿಸಿದರು. ಮಹಿಳಾ ಆರೋಗ್ಯ ತಜ್ಞೆ ಡಾ. ಜೋಸ್ನಾ ಅವರ ನೇತೃತ್ವದಲ್ಲಿ ಈ ಸಮಿತಿ ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ:

ಮೆನೋಪಾಸ್ ಬಗ್ಗೆ ಜಾಗೃತಿ ಅಗತ್ಯ: ರಮ್ಯಾ

ಈ ಸಂದರ್ಭದಲ್ಲಿ ಮಾತನಾಡಿದ ನಟಿ ರಮ್ಯಾ, ಮೆನೋಪಾಸ್ ಹಂತದಲ್ಲಿ ಅನೇಕ ಮಹಿಳೆಯರು ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಭಾರತದಲ್ಲಿ ಅನೇಕ ಮಹಿಳೆಯರಿಗೆ ಮೆನೋಪಾಸ್ ಇತರ ಕೆಲವು ದೇಶಗಳಿಗೆ ಹೋಲಿಸಿದರೆ ಕಡಿಮೆ ವಯಸ್ಸಿನಲ್ಲೇ ಕಾಣಿಸಿಕೊಳ್ಳುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ಈ ಹಂತದ ಬಗ್ಗೆ ಸಮಾಜದಲ್ಲಿ ಇನ್ನಷ್ಟು ಅರಿವು ಮೂಡಿಸುವ ಅಗತ್ಯವಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಯೋಜನೆ ರೂಪಿಸಿರುವುದು ಸ್ವಾಗತಾರ್ಹ ಎಂದು ಅವರು ಅಭಿಪ್ರಾಯಪಟ್ಟರು.

ಆರೋಗ್ಯ ಜಾಗೃತಿಗೆ ಹೊಸ ಯೋಜನೆ

ಮಹಿಳೆಯರಲ್ಲಿ ಆರೋಗ್ಯದ ಬಗ್ಗೆ ಮುಕ್ತ ಸಂವಾದಕ್ಕೆ ಅವಕಾಶ ಕಲ್ಪಿಸುವುದು, ತಜ್ಞರ ಸಲಹೆ ಲಭ್ಯವಾಗುವಂತೆ ಮಾಡುವುದು ಹಾಗೂ ಅಗತ್ಯ ವೈದ್ಯಕೀಯ ನೆರವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ವಿಸ್ತರಿಸುವುದು ‘ಋತುತಾರೆ’ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಮಹಿಳೆಯರು ತಮ್ಮ ಆರೋಗ್ಯ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ, ಸಮಯೋಚಿತ ಚಿಕಿತ್ಸೆ ಮತ್ತು ಮಾರ್ಗದರ್ಶನ ಪಡೆಯಲು ಅನುಕೂಲವಾಗಲಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !