August 6, 2026
Thursday, August 6, 2026
spot_img

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನಕ್ಕಾಗಿ ಪಟ್ಟು: ಬಡಸ್ ಗ್ರಾಮಸ್ಥರಿಂದ ಅರಬೆತ್ತಲೆ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ:

ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಡಸ್ ಕೆ.ಎಚ್ ಗ್ರಾಮದ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಗುರುವಾರ ಅರಬೆತ್ತಲೆ ಪ್ರತಿಭಟನೆ ನಡೆಸಿದರು.

ಪಾರಿಶ್ವಾಡ್ ಕ್ರಾಸ್‌ನಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸುವಂತೆ ಒತ್ತಾಯಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಅವರು ರಾಜ್ಯದ ಗಮನ ಸೆಳೆದಿದ್ದು, ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿ ಮಹಿಳೆಯರು ಹಾಗೂ ಮಕ್ಕಳ ಕಲ್ಯಾಣಕ್ಕಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಪ್ರತಿಭಟನಾಕಾರರು ಹೇಳಿದರು.

ಸರ್ಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಅವರು ಪರಿಣಾಮಕಾರಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನೂತನ ಸಚಿವ ಸಂಪುಟದಲ್ಲಿ ಅವರಿಗೆ ಮತ್ತೆ ಸಚಿವ ಸ್ಥಾನ ದೊರೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಕಾಂಗ್ರೆಸ್ ಪಕ್ಷದ ನಿರ್ಧಾರದಿಂದ ನಮ್ಮ ನಿರೀಕ್ಷೆ ಭಂಗವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಮಹಿಳಾ ಕೋಟಾದಡಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಅಪಾರ ಪ್ರಮಾಣದ ರಾಜಕೀಯ ನಷ್ಟ ಉಂಟಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ವೇಳೆ ಪಿಐ ನಂದೀಶ್ವರ ಕುಂಬಾರ, ಪಿಎಸ್ಐ ಅವಿನಾಶ್ ಯರಗೊಪ್ಪ ಹಾಗೂ ಪೇದೆಗಳಾದ ಅಶೋಕ ಮಿಂಡೊಳ್ಳಿ, ಪ್ರಶಾಂತ ಆರೇರ ಸೇರಿದಂತೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !