ಹೊಸದಿಗಂತ ವರದಿ ಚಿತ್ರದುರ್ಗ:
ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹರ್-ಘರ್ ತಿರಂಗ ಅಭಿಯಾನದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಈ ವಿಶೇಷ ಸಭೆಯಲ್ಲಿ ಇದೇ ತಿಂಗಳು ಆಗಸ್ಟ್ 11 ರಿಂದ ಆಗಸ್ಟ್ 15 ರವರೆಗೆ ಹರ್-ಘರ್ ತಿರಂಗ ಅಭಿಯಾನದ ಬಗ್ಗೆ ಕೈಗೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿಸ್ಕೃತವಾಗಿ ಚರ್ಚೆ ಮಾಡಲಾಯಿತು.
ಇದನ್ನೂ ಓದಿ:
ಈ ಪೂರ್ವಭಾವಿ ಸಭೆಯಲ್ಲಿ ದಾವಣಗೆರೆ ವಿಭಾಗ ಸಹ ಪ್ರಭಾರಿ ಎ.ಮುರುಳಿ, ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ ಗುಂಡಾರ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಾಧುರಿ ಗಿರೀಶ್, ವೆಂಕಟೇಶ್ ಯಾದವ್, ಡಾ.ಪಿ.ಎಂ.ಮಂಜುನಾಥ ಸೇರಿದಂತೆ ಹರ್-ಘರ್ ತಿರಂಗ ಅಭಿಯಾನದ ಸಂಚಾಲಕರು, ರಾಜ್ಯ, ಜಿಲ್ಲಾ ಮತ್ತು ಮಂಡಲ ಮಟ್ಟದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.



