August 6, 2026
Thursday, August 6, 2026
spot_img

ಸರ್ಕಾರದ ಮಹತ್ವದ ಆದೇಶ: ಬೀದರ್ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ನೇಮಕ

ಹೊಸದಿಗಂತ ವರದಿ ಬೀದರ್:

ಬೀದರ್‌ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಕೆಎಎಸ್ ಸುರೇಖಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಉಪ ಕಾರ್ಯದರ್ಶಿಯಾಗಿದ್ದ ಸುರೇಖಾ ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರ ಜಾಗಕ್ಕೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್‌ ಕೆ.ಎಚ್ ಆ.5ರಂದು ‌ಈ ಆದೇಶ ಹೊರಡಿಸಿದ್ದಾರೆ.

ಬೀದರ್‌ ವಿಶ್ವವಿದ್ಯಾಲಯ ಕುಲಸಚಿವರಾಗಿದ್ದ ಸುರೇಖಾ ಅವರು ಅದೇ ಸಂದರ್ಭದಲ್ಲಿ ಕೆಲ ದಿನಗಳ ಕಾಲ ಪ್ರಭಾರ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಇದೀಗ ಪುನಃ ಅಪರ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.

ಇದನ್ನೂ ಓದಿ:

ಬೀದರ್ ಅಪರ ಜಿಲ್ಲಾಧಿಕಾರಿಯಾಗಿದ್ದ ಕೆಎಎಸ್‌ (ಸೂಪರ್‌ ಟೈಂ ಸ್ಕೇಲ್) ಶಿವಾನಂದ ಬಿ.ಕರಾಳೆ ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರ ಆಪ್ತ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಶಿವಾನಂದ ಬಿ.ಕರಾಳೆ ಅವರು 2010ನೇ ಸಾಲಿನ ಕೆಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕಾರವಾರ ಜಿಲ್ಲೆಯ ಸಹಾಯಕ ಆಯುಕ್ತರಾಗಿ ಹಾಗೂ ಗದಗ, ಧಾರವಾಡ, ತುಮಕೂರ ಜಿಲ್ಲೆಗಳಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !