August 7, 2026
Friday, August 7, 2026
spot_img

WEATHER | ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಇದೀಗ ಮುಂಗಾರು ಚುರುಕೊಂಡಿದ್ದು, ಇಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯಲಿದೆ. ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವೆಡೆ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಎಲ್ಲೆಲ್ಲಿ ಸಾಧಾರಣ ಮಳೆ?

ಬೆಳಗಾವಿ
ಬಾಗಲಕೋಟೆ
ಬೀದರ್‌
ಗದಗ
ಕಲಬುರಗಿ
ಕೊಪ್ಪಳ
ರಾಯಚೂರು
ವಿಜಯಪುರ
ಧಾರವಾಡ
ಹಾವೇರಿ
ಯಾದಗಿರಿ

ಬೆಂಗಳೂರಿನ ಮೇಲೆ ಕರುಣೆ ತೋರಿಸ್ತಾನಾ ವರುಣ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೊಡಗು, ಹಾಸನ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲೂ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ಇದೆ. ನಿನ್ನೆಯೂ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಿದ್ದು, ಕೊಂಚ ನೆಮ್ಮದಿ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !