August 7, 2026
Friday, August 7, 2026
spot_img

ಚಿಕ್ಕಮಗಳೂರು ಪ್ರವಾಸದ ವೇಳೆ ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ: ತಪ್ಪಿದ ದುರಂತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರು ಜಿಲ್ಲೆಯ ಬರ ಪರಿಸ್ಥಿತಿ ವೀಕ್ಷಣೆಗೆ ತೆರಳಿದ್ದ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು ವಾಹನ ಅಜ್ಜಂಪುರ ಪಟ್ಟಣದ ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರದ ಪ್ರವೇಶ ದ್ವಾರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಸಚಿವರ ವಾಹನದ ಮುಂಭಾಗದಲ್ಲಿ ಸಾಗುತ್ತಿದ್ದ ಪೊಲೀಸ್ ಎಸ್ಕಾರ್ಟ್ ಜೀಪ್ ತಿರುವಿನಲ್ಲಿ ಬ್ರೇಕ್ ಹಾಕುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗೇಟ್‌ಗೆ ಡಿಕ್ಕಿ ಹೊಡೆದಿದೆ.

ಯಾವುದೇ ಪ್ರಾಣಹಾನಿ ಇಲ್ಲ

ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಪೊಲೀಸ್ ಜೀಪ್‌ನ ಮುಂಭಾಗಕ್ಕೆ ಮಾತ್ರ ಹಾನಿಯಾಗಿದ್ದು, ಸಚಿವ ಕೆ.ಜೆ. ಜಾರ್ಜ್ ಸುರಕ್ಷಿತರಾಗಿದ್ದಾರೆ. ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.

ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದರೂ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !