August 7, 2026
Friday, August 7, 2026
spot_img

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದೆ: ಆ. 13ರ ವರೆಗೆ ಭಯಂಕರ ಮಳೆ, ಈ ಜಿಲ್ಲೆಗಳಿಗೆ ಅಲರ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕದ ವಿವಿಧ ಭಾಗಗಳಲ್ಲಿ ಆಗಸ್ಟ್ 13ರವರೆಗೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಭಾರಿ ಮಳೆಯ ಎಚ್ಚರಿಕೆ ಇಲ್ಲದಿದ್ದರೂ ಮುಂದಿನ ನಾಲ್ಕು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಯಾವ ಜಿಲ್ಲೆಗಳಿಗೆ ಅಲರ್ಟ್?

ಆಗಸ್ಟ್ 8ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ. ಕರಾವಳಿ ಭಾಗದಲ್ಲಿ ವಾರಪೂರ್ತಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ:

ಮುಂದಿನ ದಿನಗಳ ಚಿತ್ರಣ ಹೀಗಿರಲಿದೆ ನೋಡಿ

ಆಗಸ್ಟ್ 9ರಿಂದ 13ರವರೆಗೆ ರಾಜ್ಯದಲ್ಲಿ ಮಳೆಯ ತೀವ್ರತೆ ಕೆಲವು ಭಾಗಗಳಲ್ಲಿ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಮಳೆಯ ವಾತಾವರಣ ಮುಂದುವರಿಯಲಿದೆ. ಭಾರೀ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !