ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹತ್ತು ಚಕ್ರದ ಬೃಹತ್ ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿದ್ದು, ಚಾಲಕ ಹಾಗೂ ನಿರ್ವಾಹಕ ಪವಾಡಸದೃಶವಾಗಿ ಪಾರಾಗಿದ್ದಾರೆ.
ಕಡೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ತೆರಳುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆಯೇ ಲಾರಿಯ ಬ್ರೇಕ್ ಫೇಲ್ ಆಗಿದೆ. ಕಣಿವೆ ಕ್ರಾಸ್ ಬಳಿ ಇದ್ದ ರಸ್ತೆ ಪಕ್ಕದ ತಡೆ ಬೇಲಿ ಹಾಗೂ ಮರಕ್ಕೆ ಡಿಕ್ಕಿಯಾಗಿ ಲಾರಿ ಪ್ರಪಾತಕ್ಕೆ ಬಿದ್ದಿದೆ.
ಡಿಕ್ಕಿಯ ರಭಸಕ್ಕೆ ಡೆ ಬೇಲಿ ಹಾಗೂ ಲಾರಿಗೆ ಅಡ್ಡ ಸಿಕ್ಕ ಗಿಡ ಮರಗಳು ಮುರಿದು ಬಿದ್ದಿವೆ. ಲಾರಿ ಸಂಪೂರ್ಣ ಜಖಂ ಆಗಿದ್ದು. ಪ್ರಪಾತದ ಸಮತಟ್ಟ ಪ್ರದೇಶದಲ್ಲಿ ಹೋಗಿ ನಿಂತಿದೆ. ಪವಾಡವೇನೋ ಎನ್ನುವಂತೆ ಚಾಲಕ ಹಾಗೂ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



