October 13, 2026
Tuesday, October 13, 2026
spot_img

ಚಿತ್ರದುರ್ಗದಲ್ಲಿ ವಿದ್ಯುತ್‌ ಸ್ಪರ್ಶಿಸಿ ನವಿಲು, ಚಿರತೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿದ್ಯುತ್‌ ಸ್ಪರ್ಶಿಸಿ ನವಿಲು ಹಾಗೂ ಚಿರತೆ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಬ್ಬಿನಕೆರೆ ಗ್ರಾಮದಲ್ಲಿ ನಡೆದಿದೆ. ಕಬ್ಬಿನಕೆರೆ ಗ್ರಾಮದಲ್ಲಿ ಕುಡಿಯುವ ನೀರಿನ ಪಂಪ್‌ಸೆಟ್‌ಗೆ ಸಂಬಂಧಿಸಿದ ಟ್ರಾನ್ಸ್‌ಫಾರ್ಮರ್‌ ಮೇಲೇರಿದ್ದ ನವಿಲು ಆಕಸ್ಮಿಕವಾಗಿ ವಿದ್ಯುತ್‌ ತಂತಿ ಸ್ಪರ್ಶಿಸಿ ಮೃತಪಟ್ಟಿದೆ.

ಮೃತಪಟ್ಟಿದ್ದ ನವಿಲನ್ನು ನೋಡಿದ ಚಿರತೆಯೊಂದು ಬೇಟೆಯಾಡುವ ಉದ್ದೇಶದಿಂದ ವಿದ್ಯುತ್‌ ಕಂಬವನ್ನು ಏರಿದ್ದು, ಚಿರತೆಗೂ ವಿದ್ಯುತ್ ಹರಿದು, ಅದು ಸಹ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತಪಟ್ಟ ನವಿಲು ಹಾಗೂ ಚಿರತೆಯ ಶವಗಳನ್ನು ತೆರವುಗೊಳಿಸುವ ಕಾರ್ಯವನ್ನು ಕೈಗೊಂಡಿದ್ದಾರೆ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Must Read