August 10, 2026
Monday, August 10, 2026
spot_img

ಸ್ಯಾಂಡಲ್‌ವುಡ್‌ನ ಸಂಗೀತ ನಿರ್ದೇಶಕ ಗುರುಕಿರಣ್ ತಾಯಿ ರತ್ನಕಾಂತಿ ಶೆಟ್ಟಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌ ಅವರ ತಾಯಿ ರತ್ನಕಾಂತಿ ಶೆಟ್ಟಿ ಅವರು ನಿಧನರಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಗುರುಕಿರಣ್‌ ಭಾವನಾತ್ಮಕ ಪೋಸ್ಟ್‌ ಒಂದನ್ನು ಮಾಡಿದ್ದು, ತಾಯಿಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಜೀವನದ ಕೊನೆಯವರೆಗೂ ನಾವು ದೇವರನ್ನು ಕಾಣಲು ಆಗುವುದಿಲ್ಲ. ಆದರೆ ಪ್ರತೀ ಮನೆಯಲ್ಲಿಯೂ ಇರುವ ನಡೆದಾಡುವ ತಾಯಿಯನ್ನು ಗೌರವಿಸಬೇಕು, ಪೂಜಿಸಬೇಕು ಎಂದಿದ್ದಾರೆ.

https://www.instagram.com/p/DbylI59TRLP/?igsh=eTFueXlka21qbm14

ಪೋಸ್ಟ್‌ನಲ್ಲೇನಿದೆ?

ನನ್ನ ಪ್ರೀತಿಯ ತಾಯಿ ರತ್ನಕಾಂತಿ ಶೆಟ್ಟಿ ಅವರು ನಿಧನರಾಗಿದ್ದಾರೆ ಎಂಬ ಹೃದಯವಿದ್ರಾವಕ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇನೆ. ಜೀವನದಲ್ಲಿ ಏನೇ ಆಗಿದ್ದರೂ, ಏನೇ ಸಾಧಿಸಿದ್ದರೂ ಅದಕ್ಕೆಲ್ಲಾ ನನ್ನ ತಾಯಿಯೇ ಕಾರಣ ಎಂದು ಗುರುಕಿರಣ್ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಗುರುಕಿರಣ್ ಕುಟುಂಬಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಹಾಗೂ ಆತ್ಮೀಯರು ಕಂಬನಿ ಮಿಡಿದು, ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಸಂತಾಪ ಸೂಚಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !