ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗಸ್ಟ್ 13ರಂದು ಕರ್ನಾಟಕ ಬಂದ್ ನಡೆಯುತ್ತಾ? ಈ ಪ್ರಶ್ನೆ ಇದೀಗ ರಾಜ್ಯದ ಜನರಲ್ಲಿ ಕುತೂಹಲ ಮೂಡಿಸಿದೆ. ಕಾವೇರಿ ನೀರು ವಿಚಾರ ಮುಂದಿಟ್ಟುಕೊಂಡು ಘೋಷಿಸಲಾಗಿದ್ದ ಬಂದ್‌ಗೆ ಕನ್ನಡಪರ ಸಂಘಟನೆಗಳಲ್ಲೇ ಒಮ್ಮತ ಮೂಡಿಲ್ಲ. ಕೆಲವರು ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರೆ, ವಾಟಾಳ್ ನಾಗರಾಜ್ ಮಾತ್ರ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಬಂದ್‌ಗೆ ಇನ್ನೆರಡು ದಿನಗಳಿರುವಾಗಲೇ ಸಂಘಟನೆಗಳ ನಡುವಿನ ಭಿನ್ನಾಭಿಪ್ರಾಯ ತೀವ್ರಗೊಂಡಿದೆ.
ಬಂದ್‌ಗೆ ಕಾರಣವೇನು?
ಕಾವೇರಿ ನೀರು ಹಂಚಿಕೆ ವಿಚಾರವನ್ನು ಮುಂದಿಟ್ಟುಕೊಂಡು ಬಂದ್‌ಗೆ ಕರೆ ನೀಡಲಾಗಿದೆ. ತಮಿಳುನಾಡಿಗೆ ಈಗಾಗಲೇ 10 ಟಿಎಂಸಿಗೂ ಅಧಿಕ ನೀರು ಹರಿದಿದ್ದು, ರಾಜ್ಯದಲ್ಲೂ ಉತ್ತಮ ಮಳೆಯಾಗಿದೆ. ಹೀಗಾಗಿ ಈ ಹಂತದಲ್ಲಿ ಬಂದ್ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂಬ ಅಭಿಪ್ರಾಯವನ್ನು ಕೆಲ ಸಂಘಟನೆಗಳು ವ್ಯಕ್ತಪಡಿಸಿವೆ.
ಪ್ರಮುಖ ಸಂಘಟನೆಗಳು ಹಿಂದೆ ಸರಿದಿದ್ದೇಕೆ?
ಪ್ರವೀಣ್ ಶೆಟ್ಟಿ ಹಾಗೂ ಶಿವರಾಮೇಗೌಡ ಬಣಗಳು ಬಂದ್‌ಗೆ ಬೆಂಬಲ ನೀಡದಿರಲು ನಿರ್ಧರಿಸಿವೆ. ಕರವೇ ನಾರಾಯಣಗೌಡ ಕೂಡ ಆಗಸ್ಟ್ 13ರ ಬಂದ್‌ಗೆ ತಮ್ಮ ಸಂಘಟನೆಯ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಂದ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆಯನ್ನೂ ಸಂಘಟನೆಗಳು ಉಲ್ಲೇಖಿಸಿವೆ.
ಇದನ್ನೂ ಓದಿ:
ವಾಟಾಳ್ ನಾಗರಾಜ್ ನಿಲುವೇನು?
ಇನ್ನೊಂದೆಡೆ ವಾಟಾಳ್ ನಾಗರಾಜ್ ಮಾತ್ರ ಬಂದ್ ನಡೆಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ಹೋಟೆಲ್ ಸಂಘಟನೆ ಹಾಗೂ ಓಲಾ-ಉಬರ್ ವಲಯದಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ.
ಬಂದ್ ಯಶಸ್ವಿಯಾಗುತ್ತಾ?
ಪ್ರಮುಖ ಕನ್ನಡಪರ ಸಂಘಟನೆಗಳ ಬೆಂಬಲದಲ್ಲಿ ಒಗ್ಗಟ್ಟು ಕಾಣದಿರುವುದರಿಂದ ಆಗಸ್ಟ್ 13ರ ಕರ್ನಾಟಕ ಬಂದ್‌ನ ಯಶಸ್ಸಿನ ಬಗ್ಗೆ ಪ್ರಶ್ನೆಗಳು ಮೂಡಿವೆ. ಸಂಘಟನೆಗಳ ನಡುವೆ ನಡೆಯುತ್ತಿರುವ ಚರ್ಚೆಯ ಬಳಿಕ ಅಂತಿಮ ಚಿತ್ರಣ ಸ್ಪಷ್ಟವಾಗುವ ಸಾಧ್ಯತೆಯಿದೆ.



