October 12, 2026
Monday, October 12, 2026
spot_img

ಮೂಡುಬಿದಿರೆ: ಅಡುಗೆ ಮನೆಯ ಸಿಲಿಂಡರ್ ನಲ್ಲಿ ಬೆಂಕಿ; ಪತಿ, ಪತ್ನಿ ಮಗುವಿಗೆ ತೀವ್ರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಡುಗೆ ಮನೆಯ ಗ್ಯಾಸ್ ಸಿಲಿಂಡರ್ ನಿಂದಾಗಿ ಉಂಟಾದ ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ಮೂವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಿಜಾರಿನಲ್ಲಿ ಇಂದು‌ ನಡೆದಿದೆ.

ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಮಗ ಆದರ್ಶ್ (6 ) ಗಾಯಗೊಂಡವರಾಗಿದ್ದು, ಈ ಪೈಕಿ ಶಿವರಾಮಗೆ ತೀವ್ರ ತರದ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ಸುಮಾರು 6.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಕುಟುಂಬ ಇಲ್ಲಿನ‌ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದೆ. ಶಿವರಾಮ ಸ್ಥಳೀಯ ಕಾಲೇಜೊಂದರಲ್ಲಿ ಉದ್ಯೋಗಿಯಾಗಿದ್ದಾರೆ.

ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ತಪಾಸಣೆ ನಡೆಸಿದ್ದಾರೆ.

Must Read