ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆಯಾಗಿದ್ದು, ಜೈಲಧಿಕಾರಿಯನ್ನು ಸಸ್ಪೆಂಡ್ ಮಾಡಿ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ. ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಖೈದಿಗಳು ಧರಿಸುತ್ತಿದ್ದ ಬಿಳಿ ಬಟ್ಟೆಯನ್ನು ಹಾಕುತ್ತಿರಲಿಲ್ಲ ಜೊತೆಗೆ ಅವರ ಬಳಿಯಲ್ಲಿ ಮೊಬೈಲ್ ಇಟ್ಟುಕೊಂಡಿದ್ದರು. ಈ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಕಾರಣ ಕೇಳಿ ಜೈಲು ಎಸ್‌ಪಿ ಅನ್ಶುಕುಮಾರ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಆ.6ರಂದು ಜೈಲಿನ ಬ್ಯಾರಕ್‌ಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದಾಗ ಪ್ರಜ್ವಲ್ ರೇವಣ್ಣ ಬಳಿ ಯಾವ ಮೊಬೈಲ್ ಕೂಡ ಇರಲಿಲ್ಲ. ಅದಾದ ನಂತರ ಮೊಬೈಲ್ ಹೇಗೆ ಬಂತು? ಇದನ್ನು ಕೊಟ್ಟಿದ್ದು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮೊಬೈಲ್ ಕೊಟ್ಟಿರುವುದು ಯಾರು ಎಂದು ಅವರೇ ಮುಂದೆ ಬಂದು ಮಧ್ಯಾಹ್ನದ ಒಳಗೆ ಮಾಹಿತಿ ನೀಡಬೇಕು. ಇಲ್ಲವಾದರೆ ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡೋದಾಗಿ ಖಡಕ್ ಸೂಚನೆ ನೀಡಿದ್ದಾರೆ.
ಸಿಸಿಬಿ ಸತತ 6 ಗಂಟೆಗಳ ಕಾಲ ದರ್ಶನ್, ಪವಿತ್ರಗೌಡ, ಪ್ರಜ್ವಲ್ ರೇವಣ್ಣ ಸೇರಿದಂತೆ ಎಲ್ಲಾ ವಿಐಪಿ ಖೈದಿಗಳ ಬ್ಯಾರಕ್‌ನಲ್ಲಿ ಶೋಧ ನಡೆಸಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದ ಆಂಡ್ರಾಯ್ಡ್ ಫೋನ್ ಸಿಕ್ಕಿದೆ.



