March 23, 2026
Monday, March 23, 2026
spot_img

ಪ್ರಧಾನಿ ಮೋದಿ-ತಾಯಿ ಹೀರಾಬೆನ್ ನಿಂದಿಸಿ AI ವಿಡಿಯೋ!!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಕುರಿತು ನಿಂದನಾತ್ಮಕ ಎಐ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆದಿದೆ.

ವಿಡಿಯೋದಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಮೋದಿ ಹೋಲುವ ದೃಶ್ಯ ಸೃಷ್ಟಿಸಲಾಗಿದ್ದು, ವಿಡಿಯೋದಲ್ಲಿ ಸ್ವಂತ ಮಗನೇ ತಮ್ಮನ್ನು ರಾಜಕೀಯಕ್ಕೆ ಎಳೆದು ತಂದಿರುವುದಕ್ಕೆ ಹೀರಾಬೆನ್ ಅವರು ದುಃಖ ವ್ಯಕ್ತಪಡಿಸುತ್ತಿರುವುದಾಗಿ ತೋರಿಸಲಾಗಿದೆ. ಈ ವಿಡಿಯೋವನ್ನು ಬಿಹಾರ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದು, ವಿಡಿಯೋ ಕುರಿತು ಟೀಕೆಗಳು ವ್ಯಕ್ತವಾಗುತ್ತಿವೆ.

ಈ ವಿಡಿಯೋ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದ್ದು, ಕಾಂಗ್ರೆಸ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿಯನ್ನು ಮತ್ತೊಮ್ಮೆ ಅವಮಾನಿಸಿದೆ ಎಂದು ಆರೋಪಿಸಿದೆ.

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮತ್ತು ಇತರ ಹಲವಾರು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಮೋದಿಯವರ ದಿವಂಗತ ತಾಯಿ ಮಹಿಳೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !