October 12, 2026
Monday, October 12, 2026
spot_img

ಎರಡು ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ ಚಾಲಕ: ಸರಣಿ ಅಪಘಾತದಲ್ಲಿ ಇಬ್ಬರು ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗದ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ಸಾಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಮತ್ತೊಂದು ಕಾರಿಗೂ ಡಿಕ್ಕಿ ಹೊಡೆದಿರುವುದಾಗಿ ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಈವರೆಗೂ ಮೃತರ ಗುರುತು ಪತ್ತೆಯಾಗಿಲ್ಲ.ಅಪಘಾತದ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಚಾಲಕನಿಗಾಗಿ ಹುಡುಕಾಟ ನಡೆಯುತ್ತಿದೆ.

Must Read