August 14, 2026
Friday, August 14, 2026
spot_img

79ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಸಜ್ಜಾಗುತ್ತಿದೆ ಸಂಘನಿಕೇತನ: ಆಮಂತ್ರಣ ಪತ್ರಿಕೆ ಲೋಕಾರ್ಪಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ನಗರದ ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ 79ನೇ ವರ್ಷದ ಆಮಂತ್ರಣ ಪತ್ರಿಕೆ ಲೋಕಾರ್ಪಣೆಗೊಳಿಸಲಾಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ಮಹಾನಗರ ಮಾನ್ಯ ಸಂಘಚಾಲಕ್ ಡಾ. ಸತೀಶ್ ರಾವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಪ್ರಚಾರಕರಾದ ಸುರೇಶ್ ಉಪಸ್ಥಿತರಿದ್ದು‌ ಮಾರ್ಗದರ್ಶನ ನೀಡಿದರು. ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ನ ಉಪಾಧ್ಯಕ್ಷ ಕೆ. ರಘುವೀರ್ ಕಾಮತ್, ಕಾರ್ಯದರ್ಶಿ ಗಜಾನನ ಪೈ, ಸೇವಾ ಭಾರತಿ ಪ್ರಮುಖ ವಿನೋದ್ ಶೆಣೈ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರುಗಳಾದ ಆನಂದ ಪಾಂಗಳ, ಕೆ. ಪದ್ಮನಾಭ, ಸ್ಮಿತಾ ಎಂ., ಪ್ರಧಾನ ಕಾರ್ಯದರ್ಶಿ ಜಿ. ಸುರೇಶ್ ವಿ. ಕಾಮತ್, ಕೋಶಾಧಿಕಾರಿ ರಂಗನಾಥ್ ಹಾಗೂ ಜೊತೆಕಾರ್ಯದರ್ಶಿಗಳಾದ ನಂದನ್ ಮಲ್ಯ, ಜೀವನರಾಜ್ ಶೆಣೈ, ಗಣೇಶ್ ಪ್ರಸಾದ್ ಹಾಗೂ ಪೂರ್ಣಿಮಾ ಶೆಣೈ ಉಪಸ್ಥಿತರಿದ್ದರು.

ಐದು ದಿನಗಳ ಪರ್ಯಂತ ಈ ಗಣೇಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದ್ದು, ನಿತ್ಯವೂ ವಿವಿಧ ಧಾರ್ಮಿಕ, ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿರುವುದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !