August 15, 2026
Saturday, August 15, 2026
spot_img

80ನೇ ಸ್ವಾತಂತ್ರ್ಯೋತ್ಸವ: ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿದ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶಾದ್ಯಂತ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜಧಾನಿ ಬೆಂಗಳೂರಿನ ಐತಿಹಾಸಿಕ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರಧ್ವಜವನ್ನು ಹಾರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೆರವೇರಿಸಿದ ಮೊದಲ ಧ್ವಜಾರೋಹಣ ಇದಾಗಿದೆ. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸಿಎಂ ತ್ರಿವರ್ಣ ಧ್ವಜವನ್ನು ಹಾರಿಸಿದರು. ಧ್ವಜ ಮುಗಿಲತ್ತ ಹಾರುತ್ತಿದ್ದಂತೆ ಮೈದಾನದಲ್ಲಿದ್ದ ಸಹಸ್ರಾರು ಸಾರ್ವಜನಿಕರಿಂದ ಹರ್ಷೋದ್ಗಾರ ಮುಗಿಲು ಮುಟ್ಟಿತು. ಇದೇ ವೇಳೆ ‘ವಂದೇ ಮಾತರಂ’ ಗೀತೆ ಮೊಳಗಿತು ಮತ್ತು ಪೊಲೀಸ್ ಬ್ಯಾಂಡ್ ವತಿಯಿಂದ ಅತ್ಯಂತ ಗೌರವಪೂರ್ವಕವಾಗಿ ರಾಷ್ಟ್ರಗೀತೆಯನ್ನು ಪ್ರಸ್ತುತಪಡಿಸಲಾಯಿತು.

ತೆರೆದ ಜೀಪಿನಲ್ಲಿ ಗೌರವ ವಂದನೆ ಸ್ವೀಕಾರ

ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಶಸ್ತ್ರ ಪೊಲೀಸ್ ಪಡೆಗಳು, ಕೆಎಸ್‌ಆರ್‌ಪಿ, ಎನ್‌ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ತೆರೆದ ಜೀಪಿನಲ್ಲಿ ಸಾಗಿದ ಮುಖ್ಯಮಂತ್ರಿಗಳು, ಪರೇಡ್ ಮೈದಾನದ ಪ್ರತಿಯೊಂದು ವಿಭಾಗಕ್ಕೂ ಭೇಟಿ ನೀಡಿ ಸಾರ್ವಜನಿಕರಿಗೆ ಕೈಮುಗಿದು ವಂದಿಸಿದರು. ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಈ ಬಾರಿ ಮೈದಾನದಲ್ಲಿ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ:

ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ಮುಖ್ಯಮಂತ್ರಿಗಳ ಭಾಷಣದ ನಂತರ ವಿವಿಧ ಶಾಲಾ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !