August 15, 2026
Saturday, August 15, 2026
spot_img

ಕಾವೇರಿ ವಿವಾದಕ್ಕೆ ಶಾಶ್ವತ ಮುಕ್ತಿ: ವರ್ಷದೊಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ; ಸಚಿವ ಚಲುವರಾಯಸ್ವಾಮಿ

ಹೊಸದಿಗಂತ ವರದಿ ಮಂಡ್ಯ:

ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರವಾಗಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ವರ್ಷದೊಳಗೆ ಶಂಕುಸ್ಥಾಪನೆ ನೆರವೇರಿಸಲು ಸಂಕಲ್ಪ ಮಾಡಿರುವುದಾಗಿ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈ ಯೋಜನೆಗೆ 20 ಸಾವಿರ ಎಕರೆ ಭೂಮಿ ಅಗತ್ಯವಿದ್ದು, ಅದರಲ್ಲಲಿ 12,500 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಅದನ್ನು ಆದಷ್ಟು ಬೇಗ ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಇಲಾಖೆಯವರು ಚರ್ಚೆ ನಡೆಸಿ ಸ್ವಾಧೀನಪಡಿಸಿಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಹೇಳಿದರು.

ಇದನ್ನೂ ಓದಿ:

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯೋಜನೆ ಅನುಷ್ಠಾನ ವಿಚಾರದಲ್ಲಿ ನನಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಸದಾ ಜತೆ ಇದ್ದು ನಿನ್ನೊಂದಿಗೆ ಕೈಜೋಡಿಸುವೆ. ಏನೇ ಸಮಸ್ಯೆಗಳು ಎದುರಾದರೂ ಪರಿಹಾರ ಸೂಚಿಸುವುದಕ್ಕೆ ಬದ್ದನಿರುವುದಾಗಿ ಭರವಸೆ ನೀಡಿದ್ದಾರೆ. ಅವರು ಕೊಟ್ಟ ಸೂಚನೆಯಂತೆ 24 ಗಂಟೆಯೊಳಗೆ ಡಿಪಿಆರ್ ಸರಿಪಡಿಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ವಿವರಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !