August 15, 2026
Saturday, August 15, 2026
spot_img

‘ದೇಶಪ್ರೇಮದ ಪಾಠ ಇವರಿಂದ ಕಲಿಯಬೇಕಿಲ್ಲ’: ಧ್ವಜಾರೋಹಣ ವಿವಾದಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ವಾತಂತ್ರ್ಯೋತ್ಸವದಂದು ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣದಿಂದ ವಿನಾಯಿತಿ ಕೋರಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಎದುರಾಗಿರುವ ರಾಜಕೀಯ ಟೀಕೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ತಾವು ದೇಶಭಕ್ತಿ ಹಾಗೂ ಕನ್ನಡತನದ ಬಗ್ಗೆ ಯಾರಿಂದಲೂ ಪಾಠ ಕಲಿಯಬೇಕಿಲ್ಲ ಎಂದು ಪ್ರತಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ

ಚಾಮರಾಜಪೇಟೆ ಕ್ಷೇತ್ರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಖಾನ್ ಭಾಗವಹಿಸಿ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ವಿರುದ್ಧ ಕೇಳಿಬಂದ ಆರೋಪಗಳಿಗೆ ಪ್ರತಿಕ್ರಿಯಿಸಿದರು.

ಧ್ವಜಾರೋಹಣದಿಂದ ವಿನಾಯಿತಿ ಕೋರಿದ್ದೇಕೆ?

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಜಮೀರ್ ಅಹ್ಮದ್ ಖಾನ್ ಅವರು ಈ ಬಾರಿ ಧ್ವಜಾರೋಹಣದ ಜವಾಬ್ದಾರಿಯಿಂದ ವಿನಾಯಿತಿ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ:

ಈ ಹಿಂದೆ ಹಾವೇರಿ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲೂ ತಾವು ಧ್ವಜಾರೋಹಣ ಮಾಡಿದ್ದಾಗಿ ಜಮೀರ್ ಹೇಳಿದರು. ಆದರೆ ಈ ಬಾರಿ ಹೆಚ್ಚಿನ ಕೆಲಸದ ಒತ್ತಡವಿದ್ದ ಕಾರಣ ವಿಜಯನಗರದ ಸ್ಥಳೀಯ ಶಾಸಕ ಬಸವಂತಪ್ಪ ಅವರಿಗೆ ಧ್ವಜಾರೋಹಣದ ಅವಕಾಶ ನೀಡುವಂತೆ ಮನವಿ ಮಾಡಿದ್ದಾಗಿ ಸ್ಪಷ್ಟಪಡಿಸಿದರು.

‘ಬಿಜೆಪಿಯಿಂದ ದೇಶಪ್ರೇಮ ಕಲಿಯಬೇಕಿಲ್ಲ’

ತಮ್ಮ ನಿರ್ಧಾರವನ್ನು ದೇಶದ್ರೋಹಕ್ಕೆ ಹೋಲಿಸಿ ಟೀಕಿಸಿರುವ ಪ್ರತಿಪಕ್ಷಗಳ ವಿರುದ್ಧ ಜಮೀರ್ ಅಹ್ಮದ್ ಖಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ತಾವು ಹಿಂದೂಸ್ತಾನಿ ಮತ್ತು ಕನ್ನಡಿಗ ಎಂದು ಹೇಳಿದ ಅವರು, ದೇಶಪ್ರೇಮದ ವಿಚಾರದಲ್ಲಿ ಬಿಜೆಪಿಯಿಂದ ಯಾವುದೇ ಪಾಠ ಕಲಿಯುವ ಅಗತ್ಯವಿಲ್ಲ ಎಂದರು.

ಕುಮಾರಸ್ವಾಮಿ ಸರ್ಕಾರದಲ್ಲೂ ಸಚಿವನಾಗಿದ್ದೆ

ತಾವು 2006ರಲ್ಲಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರದಲ್ಲೂ ಸಚಿವರಾಗಿ ಕಾರ್ಯನಿರ್ವಹಿಸಿದ್ದಾಗಿ ಜಮೀರ್ ನೆನಪಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಎಲ್ಲರಿಗೂ ತಿಳಿದಿದೆ ಎಂದು ಹೇಳಿದ ಅವರು, ತಮ್ಮ ದೇಶಪ್ರೇಮವನ್ನು ಪ್ರಶ್ನಿಸುವುದು ಸರಿಯಲ್ಲ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !