October 14, 2026
Wednesday, October 14, 2026
spot_img

ಸರ್ದಾರ್ ಪ್ರೌಢಶಾಲೆಯಲ್ಲಿ ನೂತನ ‘ಚೆಸ್ ಪಾರ್ಕ್’ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ:

ಇಲ್ಲಿನ ಸರ್ದಾರ್ ಪ್ರೌಢಶಾಲೆಯ ಆವರಣದಲ್ಲಿ ನಿರ್ಮಿಸಲಾದ ನೂತನ ‘ಚೆಸ್ ಪಾರ್ಕ್’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಚೆಸ್ ಆಟದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಗೆ, ತಾರ್ಕಿಕ ಚಿಂತನೆ, ಏಕಾಗ್ರತೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಲು ಇಂತಹ ಚೆಸ್ ಪಾರ್ಕ್ ಗಳು ಸಹಕಾರಿಯಾಗಲಿವೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆ ಹಾಗೂ ಬೌದ್ಧಿಕ ಚಟುವಟಿಕೆಗಳಿಗೆ ಪೂರಕ ವಾತಾವರಣ ಕಲ್ಪಿಸಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಬಳಿಕ ಸಚಿವರು ವಿದ್ಯಾರ್ಥಿಗಳೊಂದಿಗೆ ಸ್ವತಃ ಚೆಸ್ ಆಡುವ ಮೂಲಕ ನೂತನ ಚೆಸ್ ಪಾರ್ಕ್ ಗೆ ಶುಭ ಹಾರೈಸಿದರು.

ಈ ವೇಳೆ ಶಾಸಕ ಆಸೀಪ್ ಸೇಠ್, ಜಿಪಂ ಸಿಇಒ ರಾಹುಲ್ ಶಿಂಧೆ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಗಣ್ಯರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Must Read