August 15, 2026
Saturday, August 15, 2026
spot_img

ರಾಷ್ಟ್ರಧ್ವಜಕ್ಕೆ ಸಚಿವ ಜಮೀರ್‌ ಅಹ್ಮದ್ ಅಪಮಾನ ಮಾಡಿದ್ದಾರೆ: ಯತ್ನಾಳ್ ಆರೋಪ

ಹೊಸದಿಗಂತ ವರದಿ ವಿಜಯಪುರ:

ಪ್ರತಿಯೊಬ್ಬರು ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜಕ್ಕೆ ಗೌರವ ನೀಡಬೇಕು. ಆದರೆ, ಸಚಿವ ಜಮೀರ್ ಅಹ್ಮದ್ ಅಪಮಾನ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ತ ಧ್ವಜಾರೋಹಣ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆದೇಶ ಮಾಡಿದ್ದರು. ಆದರೆ, ನನಗೆ ಆಗುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಪತ್ರ ಬರೆದು ರಾಷ್ಟ್ರಕ್ಕೆ ಅವಮಾನ ಮಾಡಿದ್ದಾರೆ ಎಂದು ಟೀಕಿಸಿದರು.

ಹೀಗಾಗಿ ಯಾರೇ ಆಗಲಿ ರಾಷ್ಟ್ರಕ್ಕೆ ಹಾಗೂ ಧ್ವಜಾರೋಹಣಕ್ಕೆ ಅಪಮಾನ ಮಾಡುವವರ ವಿರುದ್ಧ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು. ಅಲ್ಲದೇ, ಗೃಹ ಸಚಿವರ ಜಿಲ್ಲೆಯಲ್ಲಿ ಇಬ್ಬರು ಭಯೋತ್ಪಾದಕರು ಸಿಕ್ಕಿದ್ದಾರೆ. ಇಂತಹ ಕ್ರಿಮಿನಲ್‌ಗಳ ವಿರುದ್ಧ ಕ್ರಮಕೈಗೊಳ್ಳದೆ ಸಚಿವ ಪ್ರಿಯಾಂಕ್ ಖರ್ಗೆ ಕಾಲಹರಣ ಮಾಡುತ್ತಿದ್ದಾರೆ. ಹಾಗೂ ಆರ್‌ಎಸ್‌ಎಸ್ ಬಗ್ಗೆ ಅವರೇ ಪ್ರಚಾರ ಮಾಡುತ್ತಿದ್ದಾರೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !