October 1, 2026
Thursday, October 1, 2026
spot_img

ಮಂಗಳೂರು: ದುರ್ವಾಸನೆ ಬೀರುವ ಆಹಾರ ಪೂರೈಕೆ: ಅಂತಾರಾಷ್ಟೀಯ ಖ್ಯಾತಿಯ ರೆಸ್ಟೋರೆಂಟ್ ಗೆ ಅಧಿಕಾರಿಗಳ ದಾಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಂಗಳೂರು ನಗರದಲ್ಲಿ‌ ಕಾರ್ಯಾಚರಿಸುವ ಅಂತಾರಾಷ್ಟ್ರೀಯ ಖ್ಯಾತಿಯ ಚಿಕನ್ ಆಹಾರ ಮಳಿಗೆಯೊಂದರಿಂದ ಪೂರೈಕೆಯಾದ ಆಹಾರ ದುರ್ವಾಸನೆ ಬೀರುತ್ತಿರುವ ಬಗ್ಗೆ ಗ್ರಾಹಕರ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಇಲಾಖಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ 7–8 ತಿಂಗಳ ಹಿಂದಿನ ಮಾಂಸ ದಾಸ್ತಾನು ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಕುರಿತು ಹಲವು ಗಂಭೀರ ಪ್ರಶ್ನೆಗಳು ಎದುರಾಗಿವೆ.

ಮಳಿಗೆಯಲ್ಲಿ ಗ್ರಾಹಕರಿಗೆ ಕಲುಷಿತ ಆಹಾರ ಪೂರೈಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಹಳೆಯ ಮಾಂಸ ದಾಸ್ತಾನು ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಳಿಗೆಗೆ ಬೀಗ ಹಾಕಿಸಿದ್ದಾರೆ ಎಂದು ತಿಳಿದುಬಂದಿದೆ.

ಆಹಾರ ಪದಾರ್ಥಗಳ ಗುಣಮಟ್ಟ, ದಾಸ್ತಾನು ಹಾಗೂ ಸ್ವಚ್ಛತೆ ಸೇರಿದಂತೆ ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಲಾಗಿದೆಯೇ ಎಂಬುದರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

Must Read