October 12, 2026
Monday, October 12, 2026
spot_img

ನೈಸ್ ರಸ್ತೆಯ ಟೋಲ್ ಸಂಗ್ರಹಕ್ಕೆ ಬ್ರೇಕ್ ಹಾಕಿ: ಸಿಎಂ ಡಿಕೆಶಿಗೆ ಕುಮಾರಸ್ವಾಮಿ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಟೋಲ್ ಸಂಗ್ರಹವನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ನೈಸ್ ಯೋಜನೆಗೆ ಸಂಬಂಧಿಸಿದ ಹಲವು ವಿಚಾರಗಳಲ್ಲಿ ಕಾನೂನು ಹಾಗೂ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ನೈಸ್ ಯೋಜನೆ ಸರ್ಕಾರದ ವಶಕ್ಕೆ ಪಡೆಯಲು ಒತ್ತಾಯ

ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರಾಜೆಕ್ಟ್‌ (BMICP) ಅನುಷ್ಠಾನದಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಕುಮಾರಸ್ವಾಮಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಹಲವು ವರ್ಷಗಳಾದರೂ ಭೂಮಿ ಕಳೆದುಕೊಂಡ ಕೆಲವು ರೈತರಿಗೆ ಸೂಕ್ತ ಪರಿಹಾರ ದೊರೆತಿಲ್ಲ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ:

ನ್ಯಾಯಾಲಯದ ಆದೇಶಗಳ ಉಲ್ಲೇಖ

ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳು, ವಿಧಾನಸಭೆಯ ಸದನ ಸಮಿತಿ ಹಾಗೂ ಸಚಿವ ಸಂಪುಟದ ಉಪಸಮಿತಿಗಳ ಶಿಫಾರಸುಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನೈಸ್ ಸಂಸ್ಥೆ ಫ್ರೇಮ್‌ವರ್ಕ್ ಅಗ್ರಿಮೆಂಟ್ (FWA) ಹಾಗೂ ಪ್ರಾಜೆಕ್ಟ್ ಟೆಕ್ನಿಕಲ್ ಅಗ್ರಿಮೆಂಟ್ (PTA)ನ ಕೆಲವು ಷರತ್ತುಗಳನ್ನು ಪಾಲಿಸಿಲ್ಲ ಎಂಬುದು ಅವರ ಆರೋಪವಾಗಿದೆ.

ಟೋಲ್ ಸಂಗ್ರಹ ನಿಲ್ಲಿಸಿ, ಯೋಜನೆ ಸ್ವಾಧೀನಕ್ಕೆ ಆಗ್ರಹ

ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಟೋಲ್ ಸಂಗ್ರಹವನ್ನು ತಕ್ಷಣ ನಿಷೇಧಿಸುವಂತೆ ಕುಮಾರಸ್ವಾಮಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ. ಜತೆಗೆ, ಅಗತ್ಯ ಶಾಸನಾತ್ಮಕ ಕ್ರಮ ಕೈಗೊಂಡು ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯನ್ನು ರಾಜ್ಯ ಸರ್ಕಾರದ ವಶಕ್ಕೆ ಪಡೆಯುವ ಬಗ್ಗೆಯೂ ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

Must Read