ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಅವಮಾನಕಾರಿ ರೀತಿಯಲ್ಲಿ ಮಾತನಾಡಿದ ಆರೋಪದಡಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಭಟ್ಟರಹಳ್ಳಿ ಜಂಕ್ಷನ್‌ನಲ್ಲಿ ಘಟನೆ
ಭಟ್ಟರಹಳ್ಳಿ ಜಂಕ್ಷನ್ ಬಳಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಅವರೊಂದಿಗೆ ಹರ್ಷಿತ್ ರೆಡ್ಡಿ, ಹೇಮಂತ್ ರೆಡ್ಡಿ, ರಾಹುಲ್ ಹಾಗೂ ರಾಧಾಕೃಷ್ಣ ರೆಡ್ಡಿ ಎಂಬವರು ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಮಹಿಳಾ ಪಿಎಸ್‌ಐ ನಯನಾ ಸ್ಥಳಕ್ಕೆ ತೆರಳಿದ್ದರು.
PSI ನಯನಾ ಮೇಲೆ ಹಲ್ಲೆ ಆರೋಪ
ಈ ವೇಳೆ ಆರೋಪಿಗಳು ಪಿಎಸ್‌ಐ ನಯನಾ ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದಲ್ಲದೆ ದೇಹದ ಕುರಿತು ‘ಎಮ್ಮೆ ತರ ಇದ್ದೀಯಾ, ಹೊಟ್ಟೆಗೇನು ತಿಂತೀಯಾ?’ ಎಂದು ಬಾಡಿ ಶೇಮಿಂಗ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಬಾಡಿ-ವೋರ್ನ್ ಕ್ಯಾಮೆರಾದಲ್ಲಿ ಘಟನೆಯ ದೃಶ್ಯಗಳು ದಾಖಲಾಗಿವೆ.
ಇದನ್ನೂ ಓದಿ:
ನಾಲ್ವರ ವಿರುದ್ಧ ಪ್ರಕರಣ ದಾಖಲು
ಬಾಡಿ-ವೋರ್ನ್ ಕ್ಯಾಮೆರಾ ದೃಶ್ಯಗಳನ್ನು ಆಧಾರವಾಗಿಸಿಕೊಂಡು ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಹರ್ಷಿತ್ ರೆಡ್ಡಿ, ಹೇಮಂತ್ ರೆಡ್ಡಿ, ರಾಹುಲ್ ಹಾಗೂ ರಾಧಾಕೃಷ್ಣ ರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.



