ಹೊಸದಿಗಂತ ವರದಿ ಮಂಗಳೂರು:
ನಾಗರಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 17ರ ಸೋಮವಾರ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ನಾಗರಪಂಚಮಿ ಹಬ್ಬದ ಆಚರಣೆಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ಈ ರಜೆ ಘೋಷಿಸಿದ್ದು, ಜಿಲ್ಲೆಯಾದ್ಯಂತ ಸರ್ಕಾರಿ ಕಚೇರಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸೋಮವಾರ ಕಾರ್ಯನಿರ್ವಹಿಸುವುದಿಲ್ಲ.



