ಹೊಸದಿಗಂತ ವರದಿ ಯಲ್ಲಾಪುರ:
ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಸ್‌ನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಇಡಗುಂದಿ ಬಳಿ ಅಪಘಾತ ಸಂಭವಿಸಿದೆ. ಮುಖಾಮುಖಿ ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗಕ್ಕೆ ಹಾನಿಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



