August 16, 2026
Sunday, August 16, 2026
spot_img

ವಂದೇ ಮಾತರಂಗೆ ಅಗೌರವ: ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

ಹೊಸದಿಗಂತ ವರದಿ ಬೆಳಗಾವಿ:

ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ವಂದೇ ಮಾತರಂ ಗೀತೆಗೆ ಅಗೌರವ ಸೂಚಿಸುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು.

ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣಗೊಂಡಿತು.

ಇದನ್ನೂ ಓದಿ:

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕೆಲ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಗರದ ಹೊರವಲಯದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆನಂದ ಅತ್ತುಗೋಳ ಹಾಗೂ ಗುರು ಹಿರೇಮಠ, ಮಹಾನಗರ ಅಧ್ಯಕ್ಷ ಮಹಾದೇವ ಧರೆಣ್ಣವರ, ಮುಖಂಡರಾದ ಮುರುಘೇಂದ್ರಗೌಡ ಪಾಟೀಲ, ಪ್ರಶಾಂತ್ ಅಮ್ಮಿನಭಾವಿ, ಪ್ರಸಾದ್ ದೇವರಮನಿ, ದಿಗ್ವಿಜಯ್ ಸಿದ್ನಾಳ, ಕೃಷ್ಣಾ ಪಾಟೀಲ, ಪಂಡಿತ ಓಗಲೆ, ಬಾಬು ಪಾಟೀಲ, ರಾಜಶೇಖರ ಡೋಣಿ ಸೇರಿದಂತೆ ಬಿಜೆಪಿ ಯುವ ಘಟಕದ ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !