ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಆಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಮತ್ತು ವಿಧಾನಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿನ್ನೆ ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೋಬ್ಬರು ನಾಮಪತ್ರ ಸಲ್ಲಿಸದ ಕಾರಣ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ ವಿಧಾನಸಭೆಯಲ್ಲಿ ಉಪಸಭಾದ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಮಂಕಾಳು ವೈದ್ಯ ಅವರ ಹೆಸರನ್ನು ಅನುಮೋದಿಸಿದರು.
ಬಳಿಕ ಸದನ ಎಲ್ಲಾ ಸದಸ್ಯರ ಸರ್ವಾನುಮತದಿಂದ ಮಂಕಾಳ ವೈದ್ಯ ಅವರು ಉಪಸಭಾದ್ಯಕ್ಷರಾಗಿ ಆಯ್ಕೆಯಾದರು. ಸ್ಪೀಕರ್ ಜಿ.ಎಸ್. ಪಾಟೀಲ್ ಅವರು ಧ್ವನಿ ಮತದ ನಂತರ ವೈದ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಘೋಷಿಸಿದರು.



