August 18, 2026
Tuesday, August 18, 2026
spot_img

ಧಾರವಾಡದಲ್ಲಿ ಗಣೇಶ ಹಬ್ಬಕ್ಕೆ ಸ್ಟ್ರಿಕ್ಟ್ ರೂಲ್ಸ್: ಪಿಒಪಿ ಮೂರ್ತಿ ಬ್ಯಾನ್, ಡಿಜೆ ಬಳಸಿದ್ರೆ1 ಲಕ್ಷ ರೂ. ದಂಡ ಗ್ಯಾರಂಟಿ

ಹೊಸದಿಗಂತ ವರದಿ ಧಾರವಾಡ:

ಧಾರವಾಡ ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣೇಶ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಆದೇಶಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ನೂತನ ಕಚೇರಿಯಲ್ಲಿ ಮಂಗಳವಾರ ಪರಿಸರಸ್ನೇಹಿ ಗೌರಿ-ಗಣೇಶ ಹಬ್ಬ ಆಚರಣೆ ಹಾಗೂ ಹಸಿರು ಪಟಾಕಿ ಬಳಕೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ:

ನಿಯಮ ಉಲ್ಲಂಘಿಸಿ ಮಿತಿ ಮೀರಿದ ಧ್ವನಿವರ್ಧಕ ಹಾಗೂ ಡಿಜೆ ಸೌಂಡ್ ಸಿಸ್ಟಮ್ ಬಳಸಿದರೆ ಉಪಕರಣಗಳನ್ನು ಜಪ್ತಿ ಮಾಡುವುದರ ಜೊತೆಗೆ 1 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಎಚ್ಚರಿಕೆ ನೀಡಿದರು.

ಡಿಜೆ ಸೌಂಡ್‌ನಿಂದ ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ, ಇದರ ಬದಲಾಗಿ ಡೊಳ್ಳು ಕುಣಿತ, ಹೆಜ್ಜೆ ಮೇಳ ಹಾಗೂ ಕರಡಿ ಮಜಲು ಸೇರಿದಂತೆ ಸಾಂಪ್ರದಾಯಿಕ ಜನಪದ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಅವರು ಸೂಚಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !