October 12, 2026
Monday, October 12, 2026
spot_img

ಮೃದು ಸ್ವಭಾವದ ಸಹೃದಯಿ ವ್ಯಕ್ತಿ: ಮಾಜಿ ಸಚಿವ ಬಿ.ಸಿ ನಾಗೇಶ್‌ ನಿಧನಕ್ಕೆ ಗಣ್ಯರ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಮಾಜಿ ಶಾಸಕ ಬಿ.ಸಿ. ನಾಗೇಶ್ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ ಸಂತಾಪ ಸೂಚಿಸಿದ್ದು, ನಾಗೇಶ್‌ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಯಿತು. ಅವರ ಕುಟುಂಬಕ್ಕೆ ನಾಗೇಶ್‌ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ನಾಗೇಶ್ ಅವರು ಸರಳ, ಸಜ್ಜನ ಜೆಂಟಲ್‌ಮ್ಯಾನ್ ಇನ್ ಪಾಲಿಟಿಕ್ಸ್ ಎಂದು ಬಣ್ಣಿಸಿದ್ದಾರೆ. ಎಂಎಲ್‌ಸಿ ಸಿ.ಟಿ ರವಿ ಕೂಡ ಮಾತನಾಡಿ, ಬಿ.ಸಿ. ನಾಗೇಶ್ ಅವರು ಮೃದು ಹೃದಯದ ವ್ಯಕ್ತಿ. ರಾಜಕೀಯ ಮೀರಿ ಜನಪ್ರೀತಿ ಸಂಪಾದಿಸಿದ್ದರು. ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇವೆ. ಶಾಸಕರಾಗುವ ಮುನ್ನವೇ ಎಬಿವಿಪಿಯಲ್ಲಿ ಸೇವೆ ಸಲ್ಲಿಸಿದ್ದ ನಾಗೇಶ್, ಕೊನೆಯವರೆಗೂ ಪಕ್ಷ ಹಾಗೂ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಿದ್ದಾರೆ.

Must Read