August 21, 2026
Friday, August 21, 2026
spot_img

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಪಟ್ಟು: 5ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಅಹೋರಾತ್ರಿ ಧರಣಿ

ಹೊಸದಿಗಂತ ವರದಿ ಬಳ್ಳಾರಿ:

ವಾಲ್ಮೀಕಿ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ, ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿ  ಶುಕ್ರವಾರ 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ವೇಳೆ ಬಳ್ಳಾರಿ ನಗರದ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.

ದಲಿತರ ಅಭಿವೃದ್ಧಿಗೆ, ದಲಿತರ ಮಕ್ಕಳ ಶಿಕ್ಷಣಕ್ಕೆ ಬಳಕೆಯಾಗಬೇಕಿದ್ದ ಹಣವನ್ನು ಸಚಿವ ಬಿ.ನಾಗೇಂದ್ರ ಸೇರಿ ರಾಜ್ಯ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದ್ದು, ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ತಪ್ಪಿತಸ್ಥರು ಯಾರೇ ಇರಲಿ ಎಲ್ಲರನ್ನೂ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟಕಾರರು ಒತ್ತಾಯಿಸಿದರು.

ಇದನ್ನೂ ಓದಿ:

ಇದಕ್ಕೂ ಮುನ್ನ ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಕೆಎಂಎಫ್ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ, ಮಾಜಿ ಸಂಸದ ಸಣ್ಣ ಫಕೀರಪ್ಪ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಿ.ವೆಂಕಟರಮಣ, ಮುಖಂಡ ತಿಮ್ಮಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಹಂಪಿ ರಮಣ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್.ಗುರುಲಿಂಗನ ಗೌಡ, ಐನಾಥ್ ರೆಡ್ಡಿ, ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಎಚ್.ಹನುಮಂತಪ್ಪ, ಒo ಪ್ರಕಾಶ್, ಓಬಳೇಶ್ ಮಲ್ಲನಗೌಡ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಧರಪ್ಪ ನಾಯಕ್, ಮಹಿಪಾಲ್ ಕೆ.ರಾಮಲಿಂಗಪ್ಪ, ಪಾಲಿಕೆ ಸದಸ್ಯ ಶ್ರೀನಿವಾಸ ಮೊತ್ಕರ, ಸುರೇಖಾ ಮಲ್ಲನಗೌಡ, ಚೇತನ ವೇಮಣ್ಣ, ಕೆ.ಹನುಮಂತಪ್ಪ, ಗುಡಿಗಂಟೆ ಹನುಮಂತ, ಸೇರಿದಂತೆ ಇತರರು ಇದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !