August 21, 2026
Friday, August 21, 2026
spot_img

ಅಪ್ರಾಪ್ತ ವಯಸ್ಕ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ವೇಣೂರು ನಿವಾಸಿ ರಿಕ್ಷಾ ಚಾಲಕನ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಲೆಗೆ ತೆರಳಲು ರಿಕ್ಷಾ ಬಳಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿ, ಬಳಿಕ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರು ನಿವಾಸಿ ಜಮಾಲುದ್ದೀನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ಬಾಲಕಿ ಕೆಲವು ತಿಂಗಳುಗಳಿಂದ ಆರೋಪಿಯ ರಿಕ್ಷಾದಲ್ಲಿ ಶಾಲೆಗೆ ಹೋಗಿ ಬರುತ್ತಿದ್ದಳು. ಈ ಸಂದರ್ಭದಲ್ಲಿ ಆರೋಪಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಆರೋಪಿಯ ವರ್ತನೆಯನ್ನು ಬಾಲಕಿ ವಿರೋಧಿಸಿದಾಗ, ಆತ ಜೀವ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಈ ವಿಚಾರವನ್ನು ಯಾರಿಗೂ ತಿಳಿಸದೆ ಇದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿ ಇದೇ ವಿಕೃತಿಯನ್ನು ಮುಂದುವರಿಸಿದ್ದು, ಆ.13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಆರೋಪಿ ಅಲ್ಲಿಗೆ ಬಂದಿದ್ದಾನೆ. ಬಳಿಕ ಬಾಲಕಿಗೆ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ. ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಸಹಿತ ವಿವಿಧ ಕಲಂಗಳಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !