October 11, 2026
Sunday, October 11, 2026
spot_img

ಬೇಲೂರಿನಲ್ಲಿ ಹಿಂಡು ಹಿಂಡಾಗಿ ಕಾಣಿಸಿಕೊಂಡ ಆನೆಗಳು: ಗ್ರಾಮಸ್ಥರಿಗೆ ನಡುಕ

ಹೊಸದಿಗಂತ ವರದಿ ಹಾಸನ :

ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿ ಕೋಡಿಹಳ್ಳಿ ಗ್ರಾಮದ ಸಮೀಪ ಹಿಂಡು ಹಿಂಡಾಗಿ ಕಾಡಾನೆಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿದೆ.

ಅರಣ್ಯ ಪ್ರದೇಶದಿಂದ ಗ್ರಾಮಗಳತ್ತ ಕಾಡಾನೆಗಳು ಆಗಾಗ್ಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಭಯಭೀತರಾಗಿದ್ದಾರೆ. ಕಾಡಾನೆಗಳ ಹಾವಳಿ ಹೆಚ್ಚುತ್ತಿರುವುದರಿಂದ ರೈತರು ತಮ್ಮ ಜಮೀನು ಹಾಗೂ ತೋಟಗಳಿಗೆ ತೆರಳಲು ಆತಂಕ ಪಡುವಂತಾಗಿದೆ.

ಬೇಲೂರು ತಾಲ್ಲೂಕಿನ ಬಿಕ್ಕೋಡು ಭಾಗದಲ್ಲಿ ಈ ಹಿಂದೆ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿರುವ ವರದಿಗಳಿವೆ. ಕಾಡಾನೆಗಳ ಚಲನವಲನದ ಬಗ್ಗೆ ಅರಣ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿ, ಗ್ರಾಮಸ್ಥರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Must Read