August 22, 2026
Saturday, August 22, 2026
spot_img

ಗದಗದ ಶಾಲೆಯೊಂದರ ಬಿಸಿಯೂಟದಲ್ಲಿ ಬಿದ್ದಿತ್ತು ಹಲ್ಲಿ! ಗೊತ್ತಿಲ್ಲದೇ ಊಟ ಮಾಡಿದ 20 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಹೊಸದಿಗಂತ ವರದಿ ಗದಗ:

ಹಲ್ಲಿ ಬಿದ್ದ ಬಿಸಿ ಊಟ ಸೇವಿಸಿ ಸುಮಾರು 20 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥತೆಗೊಂಡ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಬಿಡನಾಳ ಶಾಲೆಯಲ್ಲಿ ನಡೆದಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಡನಾಳ ಶಾಲೆಯಲ್ಲಿ ಘಟನೆ ನಡೆದಿದೆ. ಬಿಸಿ ಊಟ ಸೇವನೆ ನಂತರ ಮಕ್ಕಳಲ್ಲಿ ವಾಂತಿ, ಭೇದಿ ಹೊಟ್ಟೆ ನೋವುನಿಂದ ಬಳಲಿದ್ದಾರೆ. ನಂತರ ಓರ್ವ ವಿದ್ಯಾರ್ಥಿ ತಟ್ಟೆಯಲ್ಲಿ ಹಲ್ಲಿ ಕಾಣಿಸಿಕೊಂಡಿದೆ. ಅನಾರೋಗ್ಯಕ್ಕೆ ಒಳಗಾದ ಮಕ್ಕಳನ್ನು ಕೂಡಲೆ ಮುಂಡರಗಿ ತಾಲೂಕ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಶಾಲೆಯಲ್ಲಿ 200 ಕ್ಕೂ ಅಧಿಕ ಮಕ್ಕಳು ವ್ಯಾಸಂಗ ಮಾಡ್ತಿದ್ದಾರೆ.

ಅಡುಗೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂಬ ಆರೋಪವಿದೆ. ಮುಖ್ಯ ಶಿಕ್ಷಕರು, ಅಡುಗೆ ಸಿಬ್ಬಂದಿ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು. ಪಾಲಕರು ಆತಂಕಕ್ಕೆ ಒಳಗಾಗಿದ್ರು. ಸದ್ಯ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಳ್ಳುತ್ತಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಗದಗ ಜಿಲ್ಲೆ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !