ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆಯಿಂದ (ಆ.23) ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಶುರುವಾಗಲಿದೆ. ಅದಕ್ಕೂ ಮುಂಚೆ ಈ ಟೆಸ್ಟ್‌ಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಮಾಡ್ತಾರೆ ಅನ್ನೋ ಒಂದು ಮಾತು ಕ್ರಿಕೆಟ್ ವಲಯದಲ್ಲಿ ಕೇಳಿ ಬರ್ತಿದೆ.
ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಆರಂಭವಾಗಲಿದ್ದು, ಮೊದಲ ಟೆಸ್ಟ್‌ನಲ್ಲಿ 165 ರನ್‌ಗಳ ಭರ್ಜರಿ ಗೆಲುವು ದಾಖಲಿಸಿರುವ ಭಾರತ ತಂಡ ಇದೀಗ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ.
ಕುಲ್ದೀಪ್ ಬದಲು ಸರಾಂಶ್ ಜೈನ್?
ಮೊದಲ ಟೆಸ್ಟ್‌ನಲ್ಲಿ ಕುಲ್ದೀಪ್ ಯಾದವ್ ನಿರೀಕ್ಷಿತ ಮಟ್ಟದಲ್ಲಿ ಆಟ ಆಡಿಲ್ಲ. ಒಟ್ಟು 25 ಓವರ್‌ಗಳಲ್ಲಿ ಒಂದು ವಿಕೆಟ್ ಮಾತ್ರ ಪಡೆದಿದ್ದರು. ಇದಕ್ಕೆ ವಿರುದ್ಧವಾಗಿ ಮಾನವ್ ಸುತಾರ್ 10 ವಿಕೆಟ್‌ಗಳೊಂದಿಗೆ ಗಮನ ಸೆಳೆದರೆ, ರವೀಂದ್ರ ಜಡೇಜಾ ಕೂಡ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಹೀಗಿರುವಾಗ ಕೊಲಂಬೊ ಟೆಸ್ಟ್‌ನಲ್ಲಿ ಕುಲ್ದೀಪ್ ಬದಲಿಗೆ ಆಫ್‌ಸ್ಪಿನ್ನಿಂಗ್ ಆಲ್‌ರೌಂಡರ್ ಸರಾಂಶ್ ಜೈನ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ. ಆದ್ರೆ ಇದು ಇನ್ನೂ ಖಚಿತವಾಗಿಲ್ಲ.
ಕೊಲಂಬೊ ಪಿಚ್‌ನ ಸ್ವರೂಪವನ್ನು ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಭಾರತದ ಸ್ಪಿನ್ ಬೌಲಿಂಗ್ ಕೋಚ್ ಸೈರಾಜ್ ಬಹುತುಲೆ ಕೂಡ ಕುಲ್ದೀಪ್ ಮೇಲೆ ತಂಡದ ನಂಬಿಕೆ ಮುಂದುವರಿದಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:
ಪಡಿಕ್ಕಲ್ ಮೇಲೆ ಹೆಚ್ಚಿದ ನಿರೀಕ್ಷೆ
ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ದೇವದತ್ ಪಡಿಕ್ಕಲ್ ಭರ್ಜರಿ ಶತಕ ಸಿಡಿಸಿ ಗಮನ ಸೆಳೆದಿದ್ದರು. ಅವರು 167 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿದ್ದು, ಭಾರತದ ಬ್ಯಾಟಿಂಗ್ ವಿಭಾಗಕ್ಕೆ ಬಲ ತುಂಬಿದ್ದರು. ಹೀಗಾಗಿ ಮೂರನೇ ಕ್ರಮಾಂಕದಲ್ಲಿ ಪಡಿಕ್ಕಲ್ ಸ್ಥಾನ ಮತ್ತಷ್ಟು ಗಟ್ಟಿಯಾಗುವ ನಿರೀಕ್ಷೆಯಿದೆ. ಇವರ ಜತೆಗೆ ಚೊಚ್ಚಲ ಟೆಸ್ಟ್‌ನಲ್ಲೇ ಮಾನವ್ ಸುತಾರ್ ಒಟ್ಟು 10 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಶ್ರೀಲಂಕಾದ ಬ್ಯಾಟಿಂಗ್ ಪಡೆಯನ್ನು ಕಾಡಿರುವ ಅವರು ಎರಡನೇ ಪಂದ್ಯದಲ್ಲೂ ಭಾರತದ ಪ್ರಮುಖ ಸ್ಪಿನ್ ಅಸ್ತ್ರವಾಗುವ ಸಾಧ್ಯತೆಯಿದೆ.
ಆಗಸ್ಟ್ 23ರಿಂದ ನಡೆಯಲಿರುವ ಎರಡನೇ ಟೆಸ್ಟ್‌ನಲ್ಲಿ ಭಾರತ ಗೆದ್ದರೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲಿದೆ. ಮೊದಲ ಪಂದ್ಯವನ್ನು ಗೆದ್ದಿರುವ ಕಾರಣ, ಎರಡನೇ ಟೆಸ್ಟ್‌ನಲ್ಲಿ ಗೆಲುವು ಅಥವಾ ಡ್ರಾ ಸಾಧಿಸಿದರೂ ಭಾರತ ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿ ಶ್ರೀಲಂಕಾ ಪಾಲಿಗೆ ಈ ಪಂದ್ಯ ನಿರ್ಣಾಯಕವಾಗಿದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ದೇವದತ್ ಪಡಿಕ್ಕಲ್, ಶುಭ್‌ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ರವೀಂದ್ರ ಜಡೇಜಾ, ಮಾನವ್ ಸುತಾರ್, ಸರಾಂಶ್ ಜೈನ್, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ.



