August 22, 2026
Saturday, August 22, 2026
spot_img

ಮಡಿಕೇರಿಯಲ್ಲಿ ದುರಂತ: ಪ್ರವಾಸಿಗನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾ*ವು

ಹೊಸದಿಗಂತ ವರದಿ ಮಡಿಕೇರಿ:

ವಿಹಾರಕ್ಕೆ ತೆರಳಿದ್ದ ಪ್ರವಾಸಿಗರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ದಕ್ಷಿಣ ಕೊಡಗಿನ ತೆರಾಲು ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದ ಹೋಂಸ್ಟೇಗೆ ಆಗಮಿಸಿದ್ದ ಬೆಂಗಳೂರು ಮೂಲದ ಸುಮಾರು 40 ವರ್ಷ ಪ್ರಾಯದ ಪ್ರವಾಸಿಗ ಶನಿವಾರ ಸಂಜೆ ವಾಯು ವಿಹಾರಕ್ಕೆ ತೆರಳಿದ್ದರು ಎನ್ನಲಾಗಿದೆ.

ಇದನ್ನೂ ಓದಿ:

ಈ ಸಂದರ್ಭ ನಾಯಿಯೊಂದನ್ನು ಅಟ್ಟಿಸಿಕೊಂಡು ಬಂದ ಕಾಡಾನೆ, ಪ್ರವಾಸಿಗನ ಮೇಲೆ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ. ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ, ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತರ ಹೆಸರು ಹಾಗೂ ಇತರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !