October 9, 2026
Friday, October 9, 2026
spot_img

ವಿದ್ಯುತ್ ಕಂಬಕ್ಕೆ ಬೊಲೆರೋ ಜೀಪ್ ಡಿಕ್ಕಿ: ಮೂವರ ದುರ್ಮ*ರಣ

ಹೊಸದಿಗಂತ ವರದಿ ಯಾದಗಿರಿ:

ಬೊಲೆರೋ ಜೀಪ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂರು ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ‌ ಮಡ್ನಾಳ್ ಗ್ರಾಮದ ಬಳಿ ಭಾನುವಾರ ನಡೆದಿದೆ.

ಹೊನ್ನನಿಂಗಮ್ಮ (18), ಭಾಗ್ಯಶ್ರೀ (30) ಹಾಗೂ ಸತ್ಯಮ್ಮ (36) ಮೃತ ದುರ್ದೈವಿಗಳು. ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಜಿಪ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟ‌ನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು ಶಹಾಪುರ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಭೀಮರಾಯನ ಗುಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Must Read