ಹೊಸದಿಗಂತ ವರದಿ ಬೆಳಗಾವಿ:
ದೆಹಲಿಯ ಐಟಿಒ ಪ್ರದೇಶದ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಹಾಗೂ ಕಿರಾರಿ ಕ್ಷೇತ್ರದ ಶಾಸಕ ಅನಿಲ್ ಝಾ ಸೇರಿದಂತೆ ಹಲವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಶಾಸಕರು ಪ್ರಯಾಣಿಸುತ್ತಿದ್ದ ವಾಹನವು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮತ್ತೊಂದು ಕಾರಿನಲ್ಲಿ ವ್ಯಕ್ತಿಯೊಬ್ಬರು ತಮ್ಮ ಪತ್ನಿ ಹಾಗೂ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಎರಡೂ ವಾಹನಗಳಲ್ಲಿದ್ದ ಗಾಯಾಳುಗಳನ್ನು ಚಿಕಿತ್ಸೆಗಾಗಿ ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದ ವಾಹನಗಳನ್ನು ತೆರವುಗೊಳಿಸಿದರು.
ಅಪಘಾತದ ಕುರಿತು ಹೆಚ್ಚಿನ ವಿವರಗಳು ತನಿಖೆಯ ಬಳಿಕ ಲಭ್ಯವಾಗಬೇಕಿದೆ.



