October 15, 2026
Thursday, October 15, 2026
spot_img

WEATHER |ಕೊಂಚ ಬಿಡುವು ನೀಡಿ ಮತ್ತೆ ಆರ್ಭಟ ಆರಂಭಿಸಿದ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಕೊಂಚ ಬಿಡುವು ನೀಡಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ಒಟ್ಟು 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ವರುಣನ ಆರ್ಭಟ

ಮುಂಗಾರು ಮಾರುತಗಳು ತೀವ್ರಗೊಂಡಿರುವುದರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ. ಇದರೊಂದಿಗೆ ಉತ್ತರ ಒಳನಾಡಿನ ಬೀದರ್, ಕಲಬುರಗಿ ಹಾಗೂ ಬೆಳಗಾವಿ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಮಳೆ ಮುಂದುವರಿಯಲಿದ್ದು,ಈ ಹಿನ್ನೆಲೆ ಸಾರ್ವಜಿನಿಕರು  ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಬೆಂಗಳೂರಿನಲ್ಲೂ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ಹವಾಮಾನ ಸಂಪೂರ್ಣ ಬದಲಾಗಿದೆ. ಇನ್ನು ಕೆಲವು ಗಂಟೆಗಳಲ್ಲಿ ನಗರದಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆ ಇದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಈಗಾಗಲೇ ಮೋಡಕವಿದ ವಾತಾವರಣವಿದ್ದು, ರಾತ್ರಿ ವೇಳೆಗೆ ಮಳೆ ತೀವ್ರಗೊಳ್ಳಲಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ದಟ್ಟವಾಗಿದೆ. ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ.

Must Read