ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಮಾಧ್ಯಮವಾದ ವಾಟ್ಸ್ಯಾಪ್ ನಲ್ಲಿ ಮಂಜುನಾಥ್ ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ಈ ಖಾತೆಯ ಮೂಲಕ ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ, ಆ.26ರಂದು ಪುತ್ತೂರು ಬಂದ್ ನಡೆಸಲು ಸವಾಲು ಹಾಕುವಂತಹ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವಂತಹ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ವ್ಯಕ್ತಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ:103/2026, ಕಲಂ: 353(2) BNS, 2023 ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.



