August 25, 2026
Tuesday, August 25, 2026
spot_img

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಸ್ವಕ್ಷೇತ್ರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್!

ಹೊಸದಿಗಂತ ವರದಿ ಧಾರವಾಡ:

ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯದಿಂದ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದ್ದು, ಸುದೀರ್ಘ ಕಾಯುವಿಕೆಯ ನಂತರ ಕೊನೆಗೂ ತಮ್ಮ ಸ್ವಕ್ಷೇತ್ರ ಧಾರವಾಡಕ್ಕೆ ಪ್ರವೇಶಿಸಲು ಕಾನೂನು ಅಡೆತಡೆಗಳು ನಿವಾರಣೆಯಾಗಿವೆ.

ಸಾಕ್ಷ್ಯ ನಾಶ ಯತ್ನ ಪ್ರಕರಣದಲ್ಲಿ ವಿಧಿಸಲಾಗಿದ್ದ ಧಾರವಾಡ ಪ್ರವೇಶದ ನಿರ್ಬಂಧದ ಷರತ್ತುಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ, ಹಲವು ವರ್ಷಗಳಿಂದ ಸ್ವಕ್ಷೇತ್ರಕ್ಕೆ ಕಾಲಿಡಲಾಗದೆ ದೂರ ಉಳಿದಿದ್ದ ಶಾಸಕರಿಗೆ ಮತ್ತು ಅವರ ಬೆಂಬಲಿಗರಿಗೆ ಆನೆಬಲ ಬಂದಂತಾಗಿದೆ.

ಸಂಭ್ರಮಾಚರಣೆ, ಮೆರವಣಿಗೆಗೆ ತಡೆ:

ಕ್ಷೇತ್ರಕ್ಕೆ ಹಿಂತಿರುಗುವಾಗ ಅಥವಾ ಧಾರವಾಡದಲ್ಲಿ ಯಾವುದೇ ರೀತಿಯ ಶಕ್ತಿ ಪ್ರದರ್ಶನ, ಮೆರವಣಿಗೆಗಳು ಹಾಗೂ ವಿಜಯೋತ್ಸವದ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.

ಇದನ್ನೂ ಓದಿ:

ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ:

ಪ್ರಕರಣದ ಸಾಕ್ಷಿಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವ ಅಥವಾ ಬೆದರಿಕೆ ಒಡ್ಡುವ ಪ್ರಯತ್ನ ಮಾಡುವಂತಿಲ್ಲ.

ಸುದೀರ್ಘ ಕಾನೂನು ಹೋರಾಟದ ಬಳಿಕ ಸಿಕ್ಕ ಈ ರಿಲೀಫ್‌ನಿಂದಾಗಿ ವಿನಯ್ ಕುಲಕರ್ಣಿ ಅವರು ಶೀಘ್ರದಲ್ಲೇ ಧಾರವಾಡಕ್ಕೆ ತೆರಳಿ ಕ್ಷೇತ್ರದ ಜನರೊಂದಿಗೆ ನೇರ ಸಂಪರ್ಕದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !