October 9, 2026
Friday, October 9, 2026
spot_img

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಅರೆಸ್ಟ್

ಹೊಸದಿಗಂತ ವರದಿ ಯಲ್ಲಾಪುರ:

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೀರ್ಘಕಾಲದ ಎಲ್‌ಪಿಸಿ ಪ್ರಕರಣದಲ್ಲಿ ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಗುಜರಾತ್‌ನಲ್ಲಿ ಬಂಧಿಸಿದ್ದಾರೆ.

ಗುಜರಾತ್ ರಾಜ್ಯದ ಪೋರಬಂದರ್ ಜಿಲ್ಲೆಯ ಮೈರಾ ನಿವಾಸಿ, 58 ವರ್ಷದ ಕೇಸುಬಾಯಿ ಮಿನಂದಾಬಾಯಿ ಸಿಸೋಡಿಯಾ ಬಂಧಿತ ಆರೋಪಿ.

2001ರಲ್ಲಿ ಯಲ್ಲಾಪುರದ ಕಾರವಾರ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಚಾಲಕರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಜಾಮೀನು ಪಡೆದುಕೊಂಡಿದ್ದ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಪ್ರಕರಣವು 2010 ರಿಂದ ಎಲ್‌ಪಿಸಿ ಪ್ರಕರಣವಾಗಿ ಮುಂದುವರಿದಿತ್ತು.

ಇದನ್ನೂ ಓದಿ:

ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ ಆರೋಪಿಯ ಇರುವಿಕೆಯ ಮಾಹಿತಿ ಪಡೆದು ಗುಜರಾತ್‌ನ ರಣಾವಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತನನ್ನು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಪತ್ತೆಹಚ್ಚುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಭಿನಂದಿಸಿದ್ದಾರೆ.

Must Read